
ಚಿತ್ರದುರ್ಗ: ಸ್ವಾತಂತ್ರ‍್ಯ ದಿನಾಚಾರಣೆ ಅಂಗವಾಗಿ ಆಗಸ್ಟ್ 15 ರಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವ ಎಕ್ಸ್-ರೇ ಮತ್ತು ಲ್ಯಾಬ್ ಟೆಸ್ಟ್ ಗಳನ್ನು ಬಿ.ಪಿ.ಎಲ್ ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿ ಮಾಡಲಾಗುತ್ತದೆ.
ಯೋಜನೆಯ ಸೌಲಭ್ಯ ಪಡೆಯಲು ಆಸ್ಪತ್ರೆಗೆ ಬರುವಾಗ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಅನ್ನು ತಪ್ಪದೆ ತರಬೇಕು, ರೋಗಿಗಳು ಹಾಗೂ ಸಾರ್ವನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ತಿಳಿಸಿದ್ದಾರೆ.