ಯಾದಗಿರಿ: ಯಾದಗಿರಿ ನಗರದ ಮುದ್ನಾಳ್ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡೂವರೆ ತಿಂಗಳ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಗು, ಮಗುವಿನ ಅಜ್ಜ ಮತ್ತು ಆಟೋಚಾಲಕ ಸಾವನ್ನಪ್ಪಿದ್ದು, ಆಟೋದಲ್ಲಿದ್ದ ಆರು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿದ್ದ ವಾಹನಗಳು ಚಾಲಕರ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಕಂಚುಗಾರನಹಳ್ಳಿ ತಾಂಡದ ಆಟೋಚಾಲಕ ಲಕ್ಷ್ಮಣ, ಹೋತಪೇಟೆ ತಾಂಡಾ ನಿವಾಸಿ ಜಯರಾಜ್ ಹಾಗೂ ಮಗು ಮೃತಪಟ್ಟವರು. ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ.
ಯಾದಗಿರಿ ತಾಲೂಕಿನ ಕಂಚುಗಾರನಹಳ್ಳಿ ತಾಂಡಾಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ. ಯಾದಗಿರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.