
ಯಾದಗಿರಿ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಬಳಿ ನಡೆದಿದೆ.
ಯಾದಗಿರಿ ಜಿಲ್ಲೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕೋಟೆಗುಡ್ಡದ ಗ್ರಾಮದ ಬಾಲಪ್ಪ(55), ಜಟ್ಟೆಪ್ಪ(60), ಕೊಡೆಕಲ್ ಗ್ರಾಮದ ಪರಸಪ್ಪ(45) ಮೃತಪಟ್ಟ ಬೈಕ್ ಸವಾರರು ಎಂದು ಹೇಳಲಾಗಿದೆ. ಹುಣಸಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.