ಯಾದಗಿರಿ: ಸೋದರಮಾವನೇ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಯದಗಿರಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಅತ್ಯಾಚಾರಕ್ಕೊಳಗಾದ ಬಾಲಕಿ 7 ತಿಂಗಳ ಗರ್ಭಿಣಿಯಾಗಿದ್ದಾಳೆ. ಯಾದಗಿರಿ ಮಹಿಳಾ ಠಾಣೆ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಯಾದಗಿರಿ ನಿವಾಸಿಯಾಗಿರುವ ಬಾಲಕಿಯ ತಂದೆ 8 ವರ್ಷಗಳ ಹಿಂದೆ ಮೃತಪಟ್ಟಿದ್ದು, ತಾಯಿ ಐವರು ಹೆಣ್ಣುಮಕ್ಕಳೊಂದಿಗೆ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ.
4ನೇ ಮಗಳಾಗಿರುವ ಸಂತ್ರಸ್ತೆ ತನ್ನ ಅಕ್ಕನೊಂದಿಗೆ ಊರಿಗೆ ಬಂದಿದ್ದ ವೇಳೆ ಸೋದರಮಾವ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.