
ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಬಳಿ ಎರಡು ಬೈಕ್ ಮುಖಾಮುಖಿ ಡಿಕ್ಕಿ ಆಗಿದ್ದು, ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ವೆಂಕಟೇಶ ಚವ್ಹಾಣ್(20) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡೆಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಎರಡೂ ಬೈಕ್ ಗಳು ನಜ್ಜುಗುಜ್ಜಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.