
ಯಾದಗಿರಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಸಮೀಪ ಹುನಗುಂದ-ಸುರಪುರ ಹೆದ್ದಾರಿಯಲ್ಲಿ ನಡೆದಿದೆ.
ಬೀರಪ್ಪ ಮುದನೂರ(30), ಶರಣಪ್ಪ ಪರಸನಹಳ್ಳಿ(28) ಅಪಘಾತದಲ್ಲಿ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದ ಸ್ಥಳಕ್ಕೆ ಕೆಂಭಾವಿ ಠಾಣೆಯ ಪಿಎಸ್ಐ ಅಮೋಘ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿ ವೇಗ, ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.