ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಬಿಳಿಚಕ್ರ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ 13 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕಲಬುರ್ಗಿಯಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸೈದಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿಯ ಖಾಜಾ ಬಂದೇ ನವಾಜ್ ದರ್ಗಾಕ್ಕೆ ತೆರಳುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ.