
ಯಾದಗಿರಿ: ಭೀಕರ ರಸ್ತೆ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಟ್ಕಲ್ ಸಮೀಪ ನಡೆದಿದೆ.
ಟ್ಯಾಂಕರ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಾಯಚೂರು ಜಿಲ್ಲೆ ಲಿಂಗಸುಗೂರು ಹಟ್ಟಿ ಪಟ್ಟಣದ ಒಂದೇ ಕುಟುಂಬದ 7ರು ಜನರು ಸಾವನ್ನಪ್ಪಿದ್ದಾರೆ. ತೆಲಂಗಾಣದ ಕೋಡಂಗಲ್ ಗೆ ಜವಳ ಕಾರ್ಯಕ್ಕೆ ಹೋಗಿದ್ದರು. ಹಟ್ಟಿಗೆ ವಾಪಸ್ ಬರುವಾಗ ಭೀಕರ ಅಪಘಾತ ಸಂಭವಿಸಿದೆ. ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗುರುಮಠಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.