
ಯಾದಗಿರಿ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆ ವಡಿಗೇರಾ ತಾಲೂಕಿನ ಕಂಠಿ ತಾಂಡಾದಲ್ಲಿ ಘಟನೆ ನಡೆದಿದೆ.
ತಾಯಿ ನೀಲಾ ಬಾಯಿ(32), ರಾಜೇಶ್ವರಿ(11), ಡುಮ್ಮಿ(6) ಮೃತಪಟ್ಟವರು ಎಂದು ಹೇಳಲಾಗಿದೆ. ತನ್ನ ಇಬ್ಬರು ಮಕ್ಕಳ ಜೊತೆಗೆ ಕಟ್ಟಿಗೆ ತರಲು ಹೋಗಿದ್ದ ನೀಲಾಬಾಯಿ ಮಕ್ಕಳೊಂದಿಗೆ ಕೃಷಿಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಕೃಷಿ ಹೊಂಡದಲ್ಲಿ ನೀರು ಕುಡಿಯುವಾಗ ಕಾಲು ಜಾರಿ ಬಿದ್ದು ದುರಂತ ಸಂಭವಿಸಿದೆ. ಗ್ರಾಮಸ್ಥರು ಕೃಷಿಹೊಂಡದಿಂದ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಯಾದಗಿರಿಯ ಯಿಮ್ಸ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ. ವಡಿಗೇರಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.