
ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರವನ್ನು ಕೇಳಿದೆ.
ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಗೃಹ ಸಚಿವಾಲಯಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಗೃಹ ಸಚಿವಾಲಯ ಪ್ರಕರಣದ ಬಗ್ಗೆ ವರದಿ ನೀಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.
ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ತನಿಖೆ ನಿಸ್ಪಕ್ಷಪಾತ ತನಿಖೆ ನಡೆಯುತ್ತಿಲ್ಲ ಎಂದು ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದರು. ಸಿಬಿಐ ತನಿಖೆಗೆ ಪ್ರಕರಣವನ್ನು ವಹಿಸಬೇಕು ಎಂದು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಈ ನಿಟ್ಟಿನಲ್ಲಿ ಗೃಹ ಸಚಿವಾಲಯ ರಾಜ್ಯ ಸರ್ಕಾರಕ್ಕೆ ವರದಿ ಕೇಳಿದೆ.