alex Certify ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಸ್ಯಾಟಲೈಟ್ ಫೋನ್; ಪಾಕಿಸ್ತಾನಕ್ಕೆ ಕರೆ ಹೋಗಿರುವ ಶಂಕೆ; ಚುರುಕುಗೊಂಡ ತನಿಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಸ್ಯಾಟಲೈಟ್ ಫೋನ್; ಪಾಕಿಸ್ತಾನಕ್ಕೆ ಕರೆ ಹೋಗಿರುವ ಶಂಕೆ; ಚುರುಕುಗೊಂಡ ತನಿಖೆ

ಯಾದಗಿರಿ: ರಾಜ್ಯದಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು ಮಾಡಿದ್ದು, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಸ್ಯಾಟಲೈಟ್ ಫೋನ್ ಬಳಕೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸೆಪ್ಟೆಂಬರ್ 17ರಂದು ನಸುಕಿನ ಜಾವ 3ಗಂಟೆ ಸುಮಾರಿಗೆ ಸ್ಯಾಟಲೈಟ್ ಫೋನ್ ನಿಂದ ಕರೆ ಹೋಗಿದೆ. ಶೆಳ್ಳಗಿ ಗ್ರಾಮದಿಂದ ಪಾಕಿಸ್ತಾನಕ್ಕೆ ಕರೆ ಹೋಗಿದೆ ಎಂದು ಶಂಕಿಸಲಾಗಿದೆ.

ಜಿಪಿಎಸ್ ಲೊಕೇಷನ್ ಆಧಾರದ ಮೇಲೆ ಸ್ಥಳಕ್ಕೆ ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೀನಾ ನಿರ್ಮಿತ ಸ್ಯಾಟಲೈಟ್ ಫೋನ್ ನಿಂದ ಪಾಕಿಸ್ತಾನಕ್ಕೆ ಕರೆ ಹೋಗಿರಬಹುದು ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಯಾದಗಿರಿಯ ಹೆಡಗಿಮುದ್ರ ಗ್ರಾಮದಿಂದ ಸ್ಯಾಟಲೈಟ್ ಕರೆ ಹೋಗಿತ್ತು. ಈಗ ಮತ್ತೆ ಪಾಕಿಸ್ತಾನಕ್ಕೆ ಕರೆ ಹೋಗಿರುವ ಅನುಮಾನ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...