ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿದೆ.
ತನ್ನ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ರದ್ದು ಪಡಿಸುವಂತೆ ಕೋರಿ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು.