ಬೆಂಗಳೂರು: ಈ ಹಿಂದೆ ಸಚಿವರು ನಮ್ಮ ಮಾತು ಕೇಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಶಾಸಕ ಬಸವರಾಜ್ ರಾಯರೆಡ್ಡಿ ಸೇರಿದಂತೆ ಹಲವು ಶಾಸಕರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ದೂರಿದ್ದರು. ಇದೀಗ ಸಚಿವರಷ್ಟೇ ಅಲ್ಲ, ಅಧಿಕಾರಿಗಳು ಕೂಡ ಕ್ಯಾರೇ ಎನ್ನುತ್ತಿಲ್ಲ ಎಂದು ಮತ್ತೆ ಅಸಮಾಧಾನ ಹೊರಹಾಕಿ ರಾಯರೆಡ್ಡಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಅಧಿಕಾರಿಗಳು ನನ್ನ ಮಾತು ಕೇಳುತ್ತಿಲ್ಲ. ಜೆಸ್ಕಾಂ ಹಾಗೂ ಇಂಧನ ಸಚಿವರ ಸಭೆ ಕರೆಯಬೇಕು ಎಂದು ಪ್ರತ್ರದ ಮುಖೇನ ಶಾಸಕ ರಾಯರೆಡ್ಡಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.
ಅಧಿಕಾರಿಗಳು ನನ್ನ ಮಾತು ಕೇಳುತ್ತಿಲ್ಲ. ನನ್ನ ಅಧೀನದಲ್ಲಿ ಬರುವ ಕಿರಿಯರ ಮಾತೂ ಕೇಳುತ್ತಿಲ್ಲ. ಇದರಿಂದ ಕೆಲಸಗಳು ಆಗುತ್ತಿಲ್ಲ. ಜೆಸ್ಕಾಂ ವ್ಯಾಪ್ತಿಯಲ್ಲಿ ಟ್ರಾನ್ಸ್ ಫಾರ್ಮರ್ ಅಳವಡಿಕೆಯಾಗುತ್ತಿಲ್ಲ. ಯಲಬುರ್ಗಾ ಕ್ಷೇತ್ರವೊಂದರಲ್ಲೇ 200 ಟ್ರಾನ್ಸ್ ಫಾರ್ಮರ್ ಅಳವಡಿಕೆ ಅಗತ್ಯವಿದೆ. ಅಧಿಕಾರಿಗಳು ನಮ್ಮ ಮಾತು ಕೇಳುತ್ತಿಲ್ಲ. ಕೆಲಸವು ಸಾಗುತ್ತಿಲ್ಲ. ರೈತರಿಗೆ ಜಮೀನುಗಳಿಗೆ ನೀರು ಹರಿಸುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂಧನ ಇಲಾಖೆ ಹಾಗೂ ಜೆಸ್ಕಾಂ ಅಧಿಕರಿಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.