alex Certify ರೈತರು, ಸಹಕಾರಿಗಳಿಗೆ ಸಿಹಿ ಸುದ್ದಿ: ಆರೋಗ್ಯದ ಆಶಾಕಿರಣ ‘ಯಶಸ್ವಿನಿ’ ಯೋಜನೆ ಜಾರಿಗೆ ದಿನಾಂಕ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು, ಸಹಕಾರಿಗಳಿಗೆ ಸಿಹಿ ಸುದ್ದಿ: ಆರೋಗ್ಯದ ಆಶಾಕಿರಣ ‘ಯಶಸ್ವಿನಿ’ ಯೋಜನೆ ಜಾರಿಗೆ ದಿನಾಂಕ ಫಿಕ್ಸ್

ಮೈಸೂರು: ಯಶಸ್ವಿನಿ ಯೋಜನೆ ಜಾರಿಗೆ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದ್ದು, ಅಕ್ಟೋಬರ್ 2 ರಂದು ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ.

ಮೈಸೂರು ಜಿಲ್ಲಾಡಳಿತದಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ವರ್ಷದ ಬಜೆಟ್ ನಲ್ಲಿ ಯಶಸ್ವಿನಿ ಯೋಜನೆ ಪುನರಾರಂಭಕ್ಕೆ ಘೋಷಣೆ ಮಾಡಿದ್ದು, 300 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. 100 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು. ಯಶಸ್ವಿನಿ ಯೋಜನೆ ರೈತರ ಆರೋಗ್ಯದ ಆಶಾಕಿರಣವಾಗಿದ್ದು, ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ. ಅಕ್ಟೋಬರ್ 2 ರಂದು ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...