
ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದವರು ಮೂವರು ಯುವಕರ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಯಶ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಶುಭಾಷಯ ಕೋರಲು ಅಭಿಮಾನಿಗಳು ಗದಗದ ಲಕ್ಷ್ಮೀಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಅವರ ಬೃಹತ್ ಕಟೌಟ್ ಕಟ್ಟುತ್ತಿದ್ದರು. ಈ ವೇಳೆ ಏಕಾಏಕಿ ವಿದ್ಯುತ್ ತಗುಲಿ ಕಟೌಟ್ ಕಟ್ಟುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಹನುಮಂತ (21), ಮುರಳಿ (20), ನವೀನ್ ಗಾಜಿ (19) ಮೃತ ಯುವಕರು. ಸೂರಣಗಿ ಗ್ರಾಮದಲ್ಲಿ ಮಕ್ಕಳನ್ನು ಕಳೆದುಕೊಂಡ ಕುಟುಂಬದವರ ರೋಧನ ಮುಗಿಲು ಮುಟ್ಟಿದೆ. ದು:ಖ, ಆಕ್ರಂದನದ ನಡುವೆಯೇ ಕುಟುಂಬ ಸದಸ್ಯರು ಮೂವರು ಯುವಕರ ಚಿತಗೆ ಅಗ್ನಿಸ್ಪರ್ಶ ಮಾಡಿದ್ದು, ಸಾಮೂಹಿಕವಾಗಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಇನ್ನೊಂದೆಡೆ ನ್ಟ ಯಶ್ ಗ್ರಾಮಕ್ಕೆ ಆಗಮಿಸಿ ಕುಟುಂಬದವರಿಗೆ ಸಾಂತ್ವನ ಹೇಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.