ಬೆಂಗಳೂರು : 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:31-03-2024 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:01-01-2024 ರಿಂದ ದಿನಾಂಕ:28-02-2024 ರವರೆಗೆ ಮುಂದುವರೆಸಲಾಗಿತ್ತು.
ಮೇಲೆ ಓದಲಾದ ಕ್ರ.ಸಂ. (2) ರಲ್ಲಿ ಯಶಸ್ವಿನಿ ಯೋಜನೆಯು ಒಂದು ಜನಪ್ರಿಯ ಯೋಜನೆಯಾಗಿದ್ದು ಈ ಯೋಜನೆಯು ಹೆಚ್ಚಿನ ಸಂಖ್ಯೆಯ ಸಹಕಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಯೋಜನೆಯಡಿ ಇನ್ನೂ ಹೆಚ್ಚಿನ ಸದಸ್ಯರನ್ನು ನೋಂದಾಯಿಸಿಕೊಳ್ಳಲು ಅನುವಾಗುವಂತೆ ನೋಂದಣಿ ಅವಧಿಯನ್ನು ದಿ:31-03-2024 ರವರೆಗೆ ವಿಸ್ತರಿಸುವಂತೆ ಕೋರಿರುತ್ತಾರೆ.
ಆದುದರಿಂದ ಯಶಸ್ವಿನಿ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಸಹಕಾರಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಸದಸ್ಯತ್ವ ನೋಂದಣಿ ಅವಧಿಯನ್ನು ದಿನಾಂಕ:29-02-2024 ರಿಂದ ದಿನಾಂಕ:31-03-2024 ರವರೆಗೆ ವಿಸ್ತರಿಸಲು ತೀರ್ಮಾನಿಸಿ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ:29-02-2024 ರಿಂದ ದಿನಾಂಕ:31-03-2024 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.