ಬೆಂಗಳೂರು: ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಬಿಲ್ ದಾರದೊಳಗೆ ಪಾವತಿ ಮಾಡುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಈ ಹಿಂದೆ ಸುಮಾರು 25 ಕೋಟಿ ರೂಪಾಯಿಯಷ್ಟು ಖಾಸಗಿ ಆಸ್ಪತ್ರೆಗಳ ಬಿಲ್ ಬಾಕಿ ಉಳಿದಿದ್ದು, ಇದರಿಂದಾಗಿ ಯಶಸ್ವಿನಿ ಯೋಜನೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕುತ್ತಿದ್ದವು. ಈ ಸಮಸ್ಯೆ ನಿವಾರಿಸಲಾಗಿದ್ದು, ರೋಗಿಗಳಿಗೆ ಯಾವುದೇ ತೊಂದರೆಯಾಗದು ಎಂದು ಹೇಳಿದ್ದಾರೆ.
ಯಶಸ್ವಿನಿ ಯೋಜನೆ ಚಿಕಿತ್ಸೆ ದರವನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ದರಕ್ಕೆ ಸಮನಾಗಿ ಪರಿಷ್ಕರಿಸಲು ತೀರ್ಮಾನಿಸಿದ್ದು, ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ನೀಡಿವೆ. ರಾಜ್ಯದ ಎಲ್ಲೆಡೆ ಖಾಸಗಿ ಆಸ್ಪತ್ರೆಗಳು ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ನೀಡಲು ಮುಂದೆ ಬಂದಿವೆ ಎಂದು ತಿಳಿಸಿದ್ದಾರೆ.