ಬೆಂಗಳೂರು: ಸಹಕಾರ ಇಲಾಖೆಯಿಂದ ಯಶಸ್ವಿನಿ ಯೋಜನೆ ಮರು ಜಾರಿಗೆ ಉದ್ದೇಶಿಸಿದ್ದು, ಅ. 2 ರಂದು ಚಾಲನೆ ನೀಡಲಾಗುತ್ತದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಜೆಟ್ ನಲ್ಲಿ ಘೋಷಿಸಿದ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಹಕಾರ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಯಶಸ್ವಿನಿ ಯೋಜನೆ ಮರು ಜಾರಿಗೆ ಸೂಚನೆ ನೀಡಿದ್ದಾರೆ.
ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರು, ಬಡವರಿಗೆ ಸಹಕಾರ ಇಲಾಖೆ ಮೂಲಕ ಯಶಸ್ವಿನಿ ಯೋಜನೆ ಜಾರಿಗೆ ತಂದಿದ್ದ ಯಶಸ್ವಿನಿ ಯೋಜನೆಯಿಂದ ಒಂದು ಪೈಸೆ ಖರ್ಚಿಲ್ಲದೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿತ್ತು. ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆ ಜಾರಿಯಾದ ನಂತರ ಯಶಸ್ವಿನಿ ಯೋಜನೆ ಕೈಬಿಡಲಾಗಿತ್ತು. ಈಗ ಮರು ಜಾರಿಗೆ ಕ್ರಮ ಕೈಗೊಳ್ಳಲಾಗಿದೆ.