ಬೆಂಗಳೂರು: ಯಶಸ್ವಿನಿ ಯೋಜನೆ ನೋಂದಣಿಗೆ ಡಿಸೆಂಬರ್ 31 ಕೊನೆಯ ದಿನವಾಗಿದ್ದು, ಲಕ್ಷಾಂತರ ರೈತರು ಇನ್ನೂ ನೋಂದಣಿ ಮಾಡಿಸಿಕೊಂಡಿಲ್ಲ.
ಸಹಕಾರ ಸಂಘಗಳಲ್ಲಿ ಖಾತೆ ಹೊಂದಿದ ಸ್ತ್ರೀಶಕ್ತಿ ಸಂಘಗಳ ಸದಸ್ಯರು ಷೇರುದಾರರಾಗಿಲ್ಲದ ಕಾರಣ ದಿನಾಂಕ ವಿಸ್ತರಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಸ್ತ್ರೀಶಕ್ತಿ ಸಹಕಾರ ಸಂಘಗಳ ಮಹಿಳೆಯರು ಸಂಘದ ಖಾತೆ ಹೊಂದಿದ್ದರೂ ವೈಯಕ್ತಿಕವಾಗಿ ಷೇರುದಾರರಾಗಿಲ್ಲ. ಅಂತಹ ಮಹಿಳೆಯರಿಗೆ ಯಶಸ್ವಿನಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಇನ್ನೂ ಅನೇಕ ರೈತರು ನೋಂದಣಿ ಮಾಡಿಸಿಕೊಂಡಿಲ್ಲ. ರಾಜ್ಯದಲ್ಲಿ ಸುಮಾರು 45,000 ವಿವಿಧ ರೀತಿಯ ಸಹಕಾರ ಸಂಘಗಳಿದ್ದು 2.30 ಕೋಟಿಗೂ ಅಧಿಕ ಸದಸ್ಯರಿದ್ದಾರೆ. ಇವರಲ್ಲಿ 30 ಲಕ್ಷ ಸದಸ್ಯರನ್ನು ಯಶಸ್ವಿನಿ ಯೋಜನೆಗೆ ನೋಂದಾಯಿಸುವ ಗುರಿ ಹೊಂದಿದ್ದು, ಸುಮಾರು 20 ಲಕ್ಷ ನೋಂದಣಿ ಮಾಡಲಾಗಿದೆ. ಯಶಸ್ವಿನಿ ಯೋಜನೆಗೆ ನೊಂದಣಿ ಮಾಡಿಸಿಕೊಳ್ಳಲು ಸಹಕಾರ ಸಂಘಗಳ ಷೇರುದಾರರಾಗಬೇಕಿದೆ. ಕೊನೆಯ ದಿನ ವಿಸ್ತರಿಸಬೇಕೆಂದು ಒತ್ತಾಯ ಕೇಳಿ ಬಂದಿದೆ.