
ಮೈಸೂರು: ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ಕೆಲವೊಮ್ಮೆ ವಿಳಂಬವಾಗಿರಬಹುದು ಆದರೆ ಖಾತೆಗೆ ಹಣ ಜಮೆಯಾಗಲಿದೆ ಎಂದರು.
ತಾಂತ್ರಿಕ ಕಾರಣಗಳಿಂದ ವಿಳಂಬವಾಗಿರಬಹುದು. ಆದರೆ ಯೋಜನೆ ನಿಲ್ಲುವುದಿಲ್ಲ. ಶೀಘ್ರದಲ್ಲೇ ಗೃಹಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೊಜನೆಗಳ ಹಣ ಫಲಾನುಭವಿಗಳ ಖಾತೆಗೆ ಒಟ್ಟಿಗೆ ಜಮೆಯಾಗಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.
ಇನ್ನು ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಈಗಾಗಲೇ ಈ ಬಗ್ಗೆ ಹೈಕಮಾಂಡ್ ಹೇಳಿಕೆಗಳನ್ನು ಕೊಡದಂತೆ ಸೂಚಿಸಿದೆ. ಇದು ನಮ್ಮ ಪಕ್ಷದ ಆಂತರಿಕ ವಿಚಾರ. ಅಲ್ಲದೇ ಸಿಎಂ ಬದಲಾವಣೆ ಪ್ರಶ್ನೆ ಇಲ್ಲ ಎಂದು ಹೈಕಮಾಂಡ್ ಕೂಡ ತಿಳಿಸಿದೆ. ಈ ಬಗ್ಗೆ ಯಾವುದೇ ಚರ್ಚೆ ಬಗ್ಗೆ ನಾನು ಮಾತನಾಡಲ್ಲ ಎಂದು ತಿಳಿಸಿದರು.