ನವದೆಹಲಿ: ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ದೆಹಲಿಗೆ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಾಯಕತ್ವ ಬದಲಾವಣೆ ಮತ್ತು ವಿಜಯೇಂದ್ರ ಭ್ರಷ್ಟಾಚಾರದ ಬಗ್ಗೆ ಯತ್ನಾಳ್ ಹಲವು ಬಾರಿ ಮಾತನಾಡಿದ್ದರು. ಅವರು ಇದೇ ವಿಚಾರಕ್ಕೆ ದೆಹಲಿ ಆಗಮಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಯತ್ನಾಳ್ ಅವರು ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ನೂತನ ಕೇಂದ್ರ ಸಚಿವರಿಗೆ ಶುಭಾಶಯ ಕೋರಲು ಆಗಮಿಸಿರುವುದಾಗಿ ಹೇಳಿದ್ದಾರೆ.
ಇತ್ತೀಚೆಗಷ್ಟೇ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಬಸವನಗೌಡ ಪಾಟೀಲ್ ಯತ್ನಾಳ್ ಆಗಮಿಸಿದ್ದು, ನೂತನ ಸಚಿವರಿಗೆ ಶುಭಾಶಯ ಹೇಳಲು ಬಂದಿರುವುದಾಗಿ ತಿಳಿಸಿದ್ದಾರೆ. ಹೀಗಿದ್ದರೂ, ಅವರು ದೆಹಲಿಯಲ್ಲಿ ಹಲವು ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ. ಅವರ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.