alex Certify ಬಿಜೆಪಿ ಶಾಸಕ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಫೋಟೋ ವೈರಲ್: ಕ್ರಮಕ್ಕೆ ಒತ್ತಾಯಿಸಿ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಶಾಸಕ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಫೋಟೋ ವೈರಲ್: ಕ್ರಮಕ್ಕೆ ಒತ್ತಾಯಿಸಿ ದೂರು

ವಿಜಯಪುರ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಮಕ್ಕೆ ಒತ್ತಾಯಿಸಿ ದೂರು ನೀಡಲಾಗಿದೆ.

‘ಬಿಜೆಪಿಯ ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣಗಣನೆ… ಭರ್ಜರಿ ಯಶಸ್ಸು ಕಾಣಲಿ ಎಂದು ಆಶಿಸುವೆ’ ಎಂದು ಬರೆಯಲಾದ ಫೋಟೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂತಹ ಫೋಟೋ ಹರಿಬಿಡುವ ಮೂಲಕ ಯತ್ನಾಳ್ ಅವರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿ ಅವರ ಬೆಂಬಲಿಗ ಲಕ್ಷ್ಮಣ ಜಾಧವ್ ವಿಜಯಪುರ ನಗರದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಮ್ಮ ಕಾಂಗ್ರೆಸ್ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಕಾಣಿಸಿಕೊಂಡಿದೆ. ಇದಲ್ಲದೆ ಜೆಡಿಎಸ್ ಮಿಷನ್ 2023 ಎಂಬ ಫೇಸ್ಬುಕ್ ಖಾತೆಯಲ್ಲಿಯೂ ಫೋಟೋ ಹರಿದಾಡಿದೆ ಎಂದು ಹೇಳಲಾಗಿದ್ದು, ಶಾಸಕರ ಬೆಂಬಲಿಗ ಜಾಧವ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...