ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಆಗಿದೆ. ಹಾಗಾಗಿ ಅವರು ಸ್ಪರ್ಧೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಯತ್ನಾಳ್, ದಿಂಗಾಲೇಸ್ಗ್ವರ ಸ್ವಾಮೀಜಿಗೆ ಪೇಮೆಂಟ್ ಆಗಿದ್ದು ನಿಜ. ದೇಶದಲ್ಲಿ ವೀರಶೈವ ಲಿಂಗಾಯಿತರು ಬಿಜೆಪಿ ಜೊತೆ ನಿಲ್ಲುತ್ತಾರೆ. ಆದರೆ ಸ್ವಾಮೀಜಿ ಪ್ರತ್ಯೇಕವಾಗಿ ಸ್ಪರ್ಧೆಗೆ ನಿಂತಿದ್ದಾರೆ. ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿಯ ಸರ್ಕಾರವಿದೆ ಎಂದು ಕಿಡಿಕಾರಿದರು.
ದಿಂಗಾಲೇಸ್ಗ್ವರ ಸ್ವಾಮೀಜಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೆ ಯಾವುದೇ ತೊಂದರೆ ಇಲ್ಲ. ದಿಂಗಾಲೇಶ್ವರ ಸ್ವಾಮೀಜಿ ಕೇವಲ 500 ಮತಗಳನ್ನು ಪಡೆಯುತ್ತಾರೆ. ಹಿಂದೆ ಮಾತೆ ಮಹಾದೇವಿ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅವರು ಎಷ್ಟು ಮತಗಳನ್ನು ಪಡೆದಿದ್ದರು ಎಂಬುದು ಎಲ್ಲರಿಗೂ ಗೊತ್ತು. ಹಿಂದೆ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಸ್ವಾಮೀಜಿಯನ್ನು ತೆಗಳುತ್ತಿದ್ದರು. ಈಗ ಒಳ್ಳೆ ಸ್ವಾಮೀಜಿ ಎನ್ನುತ್ತಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.