alex Certify ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸ್ಪೀಕರ್ ಖಾದರ್, ಸಿಎಂ ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸ್ಪೀಕರ್ ಖಾದರ್, ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸ್ಪೀಕರ್ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದರು.

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸುವಾಗ ಮಾರ್ಷಲ್ ಗಳ ನಡುವೆ ಉಂಟಾದ ನೂಕು ನುಗ್ಗಲಿನಲ್ಲಿ ಯತ್ನಾಳ್ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿ ಕುಸಿದು ಬಿದ್ದರು. ತಕ್ಷಣವೇ ಬಿಜೆಪಿ ಶಾಸಕರು ಹಾಗೂ ಮಾರ್ಷಲ್ ಗಳು ಅವರನ್ನು ವಿಧಾನಸೌಧದಿಂದ ಹೊರಗೆ ಕರೆತಂದು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದರು. ಚಿಕಿತ್ಸೆ ಬಳಿಕ ಯತ್ನಾಳ್ ಚೇತರಿಸಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಯತ್ನಾಳ್ ಅವರ ಆರೋಗ್ಯದ ಸ್ಥಿತಿಗತಿ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...