
ಕೊಪ್ಪಳ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಬಾರಿಯೂ ಬಿಜೆಪಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕಿದೆ. ಮೈತ್ರಿ ಬಗ್ಗೆ ಏನೇ ಇದ್ದರೂ ದೆಹಲಿ ಮಟ್ಟದಲ್ಲಿ ನಡೆಯುತ್ತದೆ. ಮೈತ್ರಿ ಬಗ್ಗೆ ಯಡಿಯೂರಪ್ಪನವರಿಗೆ ಮಾಹಿತಿ ಇರಬೇಕು. ಅದಕ್ಕೆ ಅವರು ಮೈತ್ರಿ ಬಗ್ಗೆ ಹೇಳಿದ್ದಾರೆ. ಕೆಲವೊಂದು ಕಡೆ ಹೊಂದಾಣಿಕೆಯಾದರೆ ಬಿಜೆಪಿ ವೀಕ್ ಆಗಿದೆ ಎಂದು ಅರ್ಥವಲ್ಲ. ಪಕ್ಷ ಕೈಗೊಳ್ಳುವ ನಿರ್ಣಯಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಯತ್ನಾಳ್ ಹೇಳಿದ್ದಾರೆ.