ಬೆಳಗಾವಿ: ಬಿ.ಎಲ್.ಪಿ. ಸಭೆ ಬಗ್ಗೆ ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ ಎಂದು ಮತ್ತೆ ಬಹಿರಂಗವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕನ ಸ್ಥಾನ ಸಿಗುವವರೆಗೆ ನಾನು ಯಾವುದೇ ಸಭೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಬೊಮ್ಮಾಯಿ ಅವರಷ್ಟೇ ಅಲ್ಲ ಅನೇಕರ ಸೋಲಿಗೆ ವಿಜಯೇಂದ್ರ ಕಳೆದ ಚುನಾವಣೆಯಲ್ಲಿ ಹುನ್ನಾರ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಅವರಿಂದ ನಮ್ಮ ಸಮಾಜಕ್ಕೆ ಮೀಸಲಾತಿ ಹಾಗೂ ನ್ಯಾಯ ಸಿಗುವುದಿಲ್ಲ ಯತ್ನಾಳ್ ಹೇಳಿದ್ದಾರೆ.