alex Certify ಮತ್ತೆ ಅಸಮಾಧಾನ ಹೊರ ಹಾಕಿದ ಯತ್ನಾಳ್: ವಿಜಯೇಂದ್ರ ವಿರುದ್ಧ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಅಸಮಾಧಾನ ಹೊರ ಹಾಕಿದ ಯತ್ನಾಳ್: ವಿಜಯೇಂದ್ರ ವಿರುದ್ಧ ಗಂಭೀರ ಆರೋಪ

ಬೆಳಗಾವಿ: ಬಿ.ಎಲ್.ಪಿ. ಸಭೆ ಬಗ್ಗೆ ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ ಎಂದು ಮತ್ತೆ ಬಹಿರಂಗವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕನ ಸ್ಥಾನ ಸಿಗುವವರೆಗೆ ನಾನು ಯಾವುದೇ ಸಭೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಬೊಮ್ಮಾಯಿ ಅವರಷ್ಟೇ ಅಲ್ಲ ಅನೇಕರ ಸೋಲಿಗೆ ವಿಜಯೇಂದ್ರ ಕಳೆದ ಚುನಾವಣೆಯಲ್ಲಿ ಹುನ್ನಾರ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಅವರಿಂದ ನಮ್ಮ ಸಮಾಜಕ್ಕೆ ಮೀಸಲಾತಿ ಹಾಗೂ ನ್ಯಾಯ ಸಿಗುವುದಿಲ್ಲ ಯತ್ನಾಳ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...