
ಕಲಬುರ್ಗಿ: ಸಿದ್ದಸಿರಿ ಸಕ್ಕರೆ ಕಾರ್ಖಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ನೊಟೀಸ್ ಜಾರಿ ಮಾಡಲಾಗಿದೆ.
ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ಕಾರ್ಖಾನೆ ವಿರುದ್ಧ ನೋಟಿಸ್ ಜಾರಿ ಮಾಡಿದ್ದು, ಕೇವಲ 24 ಗಂಟೆಯಲ್ಲಿ ಉತ್ತರಿಸುವಂತೆ ಸೂಚಿಸಿದೆ.
ಸಿದ್ಧಸಿರಿ ಕಾರ್ಖಾನೆಯಲ್ಲಿ ಅನುಮತಿ ಪಡೆಯದೇ ಕಬ್ಬು ಅರೆಯಲಾಗಿದೆ. ಕಬ್ಬು ಅರೆದಿರುವುದು ವಾಯು ನಿಯಂತ್ರಣ ಮಂಡಳಿ ಕಾಯ್ದೆಯ ಉಲ್ಲಂಘನೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.