
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಆದರೆ ಎಷ್ಟು ಪಾಪ ಕಳೆಯಿತು ಎಂಬುದನ್ನು ಹೇಳಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಡಿ.ಕೆ.ಶಿವಕುಮಾರ್ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಅವರವರ ವೈಯಕ್ತಿಕ ಭಕ್ತಿ. ಅದರ ಬಗ್ಗೆ ಮಾತನಾಡುವುದು ಸರಿಯಲ್ಲ. ಆದರೆ ಡಿಕೆಶಿಯವರು ಪುಣ್ಯಸ್ನಾನ ಮಾಡಿದ್ದಾರೆ ಎಷ್ಟು ಪಾಪ ಕಳೆದು ಹೋಯಿತು ಎಂಬುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವರದಿ ಪಡೆಯಬೇಕು ಎಂದು ಲೇವಡಿ ಮಾಡಿದರು.