ಧಾರವಡ: ಲೊಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಮತದಾರರ ಓಲೈಕೆಗಾಗಿ ನಾನಾ ಕಸರತ್ತು ನಡೆಸಿದ್ದಾರೆ. ಈ ನಡುವೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ.
ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಅಜೆಂಡಾ ರೆಡಿಯಾಗಿದೆ. ಕಾಂಗ್ರೆಸ್ ನಾಯಕರೇ ಅಜೆಂಡಾ ಸಿದ್ಧ ಮಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಶಿವಾನಂದ ಪಾಟೀಲ್ ಈ ಬಗ್ಗೆ ಕಾನ್ಫರೆನ್ಸ್ ಕಾಲ್ ನಲ್ಲಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.
ಒಬ್ಬರು ಸ್ವಾಮೀಜಿ ಜೊತೆ ಡಿ.ಕೆ.ಶಿವಕುಮಾರ್, ಶಿವಾನಂದ ಪಾಟೀಲ್ ಕಾನ್ಫರೆನ್ಸ್ ಕಾಲ್ ನಲ್ಲಿ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ವ್ಯವಸ್ಥಿತವಾಗಿ ತಂತ್ರ ರೂಪಿಸುತ್ತಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.