ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿಇನ್ನಮತ, ಬನ ಬಡಿದಾಟ ತಾರಕ್ಕೇರಿದ್ದು, ಶಾಸಕ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದ್ದಿದ್ದಾರೆ.
ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಮೈಸೂರಿನಲ್ಲಿ ಶಕ್ತಿಪ್ರದರ್ಶನ ಮಾಡುವ ನಿಟ್ಟಿನಲ್ಲಿ ನಡೆಸ್ದ್ದ ಸುದ್ದಿಗೋಷ್ಠಿಯಲ್ಲಿ ಯತ್ನಾಳ್ ಉಚ್ಚಾಟನೆ ಮಾಡಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದು ಗಲಾಟೆ ನಡೆಸಿದ್ದ ಘಟನೆಯೂ ನಡೆದಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ವಿಜಯೇಂದ್ರ ಬಣದ ನಾಯಕರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದಾರೆ.
ಮಾಜಿ ಸಚಿವರಾದ ಕಟ್ಟಾ ಸುಬ್ರಹ್ಮಣ್ಯನಾಯ್ಡು, ಎಂ.ಪಿ.ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ, ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಯಡಿಯೂರಪ್ಪ ಅವರ ಧವಳಗಿರಿ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮಿಟಿಂಗ್ ನಡೆಸಿದ್ದಾರೆ. ಯತ್ನಾಳ್ ಬಣದ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಅಲ್ಲದೇ ಯತ್ನಾಳ್ ಉಚ್ಛಾಟನೆ ಬಗ್ಗೆ ಕಾರ್ಯಕರ್ತರ ಒತ್ತಡದ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತಿದೆ.
ಯತ್ನಾಳ್ ಉಚ್ಛಾಟನೆಗೆ ಕಾರ್ಯಕರಿಂದ ಅಭಿಪ್ರಾಯ ಸಂಗ್ರಹಿಸಿ, ಹೈಕಮಾಂಡ್ ಗೆ ಸಂದೇಶ ರವಾನಿಸಲುವಿಜಯೇಂದ್ರ ಬಣ ಮುಂದಾಗಿದೆ ಎಂದು ತಿಳಿದುಬಂದಿದೆ.