alex Certify ವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತೆ ಪರೋಕ್ಷ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತೆ ಪರೋಕ್ಷ ವಾಗ್ದಾಳಿ

ವಿಜಯಪುರ: ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಯಾರ ಭೇಟಿಗೂ ಹೋಗಿರಲಿಲ್ಲ, ಕಾರ್ಖಾನೆ ಕೆಲಸಕ್ಕೆ ಹೋಗಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ ಹಾಗೂ ಕೆಲವು ಸಂಸದರನ್ನು ಭೇಟಿಯಾಗಿದ್ದೇನೆ ಎಂದು ಹೇಳಿದ್ದಾರೆ.

ವಿಜಯೇಂದ್ರ ಇದ್ದರೆ 35 ಲೋಕಸಭೆ ಸೀಟು ಬರುತ್ತದೆ ಎಂದು ಹೊಗಳಿ ನನಗೇನು? 28 ಕ್ಷೇತ್ರಗಳಿದ್ದರೂ 35 ಕ್ಷೇತ್ರ ಬರುತ್ತೆ ಎಂದು ಹೇಳಲಾಗುತ್ತಾ? ಇವರ ಮುಖ ನೋಡಿ ಯಾರೂ ಮತ ಹಾಕುವುದಿಲ್ಲ. ವಂಶವಾರು, ಭ್ರಷ್ಟಾಚಾರ ಅಡ್ಜಸ್ಟ್ ಮೆಂಟ್ ರಾಜಕಾರಣ ವಿರುದ್ಧ ನನ್ನ ಹೋರಾಟವಿದೆ. ನನಗೆ ಯಾರೂ ಬೈದಿಲ್ಲ, ಎಚ್ಚರಿಕೆಯನ್ನೂ ನೀಡಿಲ್ಲ ಎಂದು ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಯತ್ನಾಳ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...