
ವಿಜಯಪುರ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗಪ್ ಚುಪ್ ಆಗಿದ್ದಾರೆ. ಬಿಜೆಪಿ ಹೈಕಮಾಂಡ್ ಸೂಚನೆ ಬೆನ್ನಲ್ಲೇ ಸೈಲೆಂಟ್ ಆಗಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪನವರ ಬಗ್ಗೆ ಯತ್ನಾಳ್ ಸಾಫ್ಟ್ ಕಾರ್ನರ್ ತೋರಿದ್ದಾರೆ.
ಯಡಿಯೂರಪ್ಪನವರ ಬಗ್ಗೆ ಮಾತನಾಡಬೇಡಿ ಎಂದು ಪಕ್ಷದ ಹೈಕಮಾಂಡ್ ನಾಯಕರು ಹೇಳಿದ್ದಾರೆ. ಹೀಗಾಗಿ, ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ವಿಜಯಪುರದಲ್ಲಿ ಯತ್ನಾಳ್ ಹೇಳಿದ್ದಾರೆ.
ಯಡಿಯೂರಪ್ಪ ಹಿರಿಯರಿದ್ದಾರೆ. ಇನ್ನು ಮುಂದೆ ಯಡಿಯೂರಪ್ಪನವರ ಬಗ್ಗೆ ಮಾತನಾಡಬೇಡಿ ಎಂದು ಸೂಚಿಸಿದ್ದಾರೆ. ಯಡಿಯೂರಪ್ಪ ನಮ್ಮ ಆಸ್ತಿ ಕಸಿದುಕೊಂಡಿಲ್ಲ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಯಡಿಯೂರಪ್ಪ ವಿರುದ್ಧ ಇನ್ಮುಂದೆ ಟೀಕೆ ಮಾಡುವುದಿಲ್ಲ. ಇನ್ನು ಮುಂದೆ ಯಡಿಯೂರಪ್ಪನವರನ್ನು ಟೀಕಿಸುವುದಿಲ್ಲ ಎಂದು ಹೇಳಿದ್ದಾರೆ.
ಹೌದು, ಯಡಿಯೂರಪ್ಪ ವಿಚಾರದಲ್ಲಿ ನಾನು ಸಾಫ್ಟ್. ಯಡಿಯೂರಪ್ಪನವರು ಹಿರಿಯರಿದ್ದಾರೆ. ಅವರ ಮೇಲೆ ಅಪಾರ ಗೌರವ ಇದೆ ಎಂದು ಹೇಳುವ ಮೂಲಕ ಯತ್ನಾಳ್ ಕೊನೆಗೂ ಯಡಿಯೂರಪ್ಪ ವಿಚಾರದಲ್ಲಿ ಸೈಲೆಂಟ್ ಆಗಿದ್ದಾರೆ ಎನ್ನಲಾಗಿದೆ.