alex Certify BIG NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣವನ್ನು ಕೊನೆಗೂ ಬಿಚ್ಚಿಟ್ಟ ಯಡಿಯೂರಪ್ಪ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣವನ್ನು ಕೊನೆಗೂ ಬಿಚ್ಚಿಟ್ಟ ಯಡಿಯೂರಪ್ಪ…!

ರಾಜ್ಯದಲ್ಲಿ ಸಿಂದಗಿ ಹಾಗೂ ಹಾನಗಲ್​ ಉಪಚುನಾವಣೆ ಕಣ ರಂಗೇರಿರುವ ಬೆನ್ನಲ್ಲೇ ಬಿ.ಎಸ್.​ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರ ಕೂಡ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಯಡಿಯೂರಪ್ಪರನ್ನು ಬಿಜೆಪಿಯವರು ಹೆದರಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವಾಗ ಯಡಿಯೂರಪ್ಪ ಏಕೆ ಮಾತನಾಡಲಿಲ್ಲ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಯಡಿಯೂರಪ್ಪ ಹಾವೇರಿಯಲ್ಲಿ ಉತ್ತರ ನೀಡಿದ್ದಾರೆ.

ಸಿಎಂ ಸ್ಥಾನಕ್ಕೆ ನಾನೇ ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದೆ. ರಾಜೀನಾಮೆ ನೀಡುವಂತೆ ನನ್ನನ್ನು ಯಾರೂ ಒತ್ತಾಯಿಸಿರಲಿಲ್ಲ. ನನಗೆ ಅಧಿಕಾರ ಎಂದಿಗೂ ಮುಖ್ಯವಾಗಿರಲಿಲ್ಲ. ಬೇರೆಯವರು ಸಿಎಂ ಆಗಲಿ ಎಂದೇ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಬಿಸಾಡಿದ್ದೆ.

ಈಗ ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನದಲ್ಲಿದ್ದಾರೆ. ನನಗೆ ಅಧಿಕಾರ ಇಲ್ಲದಿದ್ದರೂ ಜನರು ಪ್ರೀತಿ, ಬೆಂಬಲ ತೋರಿಸುತ್ತಾರೆ. ನವೆಂಬರ್​ 15ರ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ. ಬಿಜೆಪಿ ಸ್ವಂತ ಬಲದಿಂದ ಅಧಿಕಾರ ಹಿಡಿಯುವಂತೆ ಮಾಡುವುದೇ ನನ್ನ ಸಂಕಲ್ಪ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...