ತುಮಕೂರು: ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ರನ್ನು ಬಿಜೆಪಿ ಒಂದೇ ರೀತಿ ನೋಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದು ಕಾಂಗ್ರೆಸ್ ಪಕ್ಷ. ಜಾತಿಯ ವಿಷ ಬೀಜ ಬಿತ್ತುವ ಕಾಂಗ್ರೆಸ್ ಪಕ್ಷವನ್ನು ದೂರ ಇಡಬೇಕು ಎಂದು ಹೇಳಿದ್ದಾರೆ.
ಮನೆಮನೆಗೆ ಹೋಗಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ. 140 ಸ್ಥಾನ ಗೆಲ್ಲುವುದನ್ನು ತಡೆಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಹೆಣ್ಣು ಮಕ್ಕಳಿಗಾಗಿ ನಾನು ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದೇನೆ. ನನಗೆ ಜಾತಿ ಗೊತ್ತಿಲ್ಲ. ಹಿಂದೂ, ಮುಸ್ಲಿಂ ಎಲ್ಲರೂ ಒಂದೇ ಎಂದು ಯಡಿಯೂರಪ್ಪ ಹೇಳಿದ್ದಾರೆ.
ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಕೊಟ್ಟಿದ್ದು ಯಡಿಯೂರಪ್ಪ ತಾನೇ? ನಿಮ್ಮೆಲ್ಲರ ಆಶೀರ್ವಾದದಿಂದ ನಾನು ನಾಲ್ಕು ಬಾರಿ ಸಿಎಂ ಆಗಿದ್ದೆ. ನನಗೆ 80 ವರ್ಷ ತುಂಬಿದೆ. ಹಾಗಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ದೇವರ ಆಶೀರ್ವಾದವಿದ್ದರೆ ಇನ್ನೆರಡು ಸಲ ಬಿಜೆಪಿ ಗೆಲ್ಲಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.