alex Certify BIG NEWS: ಬಿಜೆಪಿ ಕಾರ್ಯಕಾರಿಣಿಯಲ್ಲಿ ಎಚ್ಚರಿಕೆ ಸಂದೇಶದೊಂದಿಗೆ ಅಚ್ಚರಿ ಹೇಳಿಕೆ ನೀಡಿದ BSY | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಕಾರ್ಯಕಾರಿಣಿಯಲ್ಲಿ ಎಚ್ಚರಿಕೆ ಸಂದೇಶದೊಂದಿಗೆ ಅಚ್ಚರಿ ಹೇಳಿಕೆ ನೀಡಿದ BSY

ದಾವಣಗೆರೆ: ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಮಾಜಿ ಸಿಎಂ ಯಡಿಯೂರಪ್ಪ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಮೋದಿ ಹೆಸರಲ್ಲಿ ಲೋಕಸಭೆ ಚುನಾವಣೆ ಗೆಲ್ಲುವುದು ಸುಲಭ. ಈಗ ರಾಜ್ಯದ ಕೆಲಸಗಳ ಆಧಾರದ ಮೇಲೆ ಚುನಾವಣೆ ನಡೆಸಬೇಕಿದೆ. ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಉಪ ಚುನಾವಣೆ ಗೆಲುವು ನಮಗೆ ಮುಖ್ಯವಾಗಿದೆ. ಗೆಲ್ಲಲು ನಮ್ಮ ಪಕ್ಷದ ಸಂಘಟನೆಯ ಶ್ರಮ ಮತ್ತು ಪ್ರಾಮಾಣಿಕ ಪ್ರಯತ್ನ ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಗೆಲುವು ಸುಲಭವಲ್ಲ. ನಾವು ಯಾವುದು ಭ್ರಮೆಯಲ್ಲಿರುವುದು ಬೇಡ ಎಂದು ಕಾರ್ಯಕರ್ತರು ಮತ್ತು ಮುಖಂಡರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ನಮಗೆ ಲೋಕಸಭೆ ಚುನಾವಣೆ ಕಷ್ಟವಾಗುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕೂತಿದೆ. ನಾವು ಎಚ್ಚೆತ್ತುಕೊಳ್ಳಬೇಕಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಗೆಲುವು ಸುಲಭ, ವಿಧಾನಸಭೆ ಚುನಾವಣೆ, ಜಿಪಂ, ತಾಪಂ ಚುನಾವಣೆಯಲ್ಲಿ ನಾವು ಗೆಲ್ಲುವತ್ತ ಗಮನಹರಿಸಬೇಕು. ಇದಕ್ಕಾಗಿ ಹೆಚ್ಚಿನ ಶ್ರಮ, ಪ್ರಯತ್ನ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...