ಬೆಂಗಳೂರು: ಗುಜರಾತ್ ನಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಮಾಡಲು ಸಮಿತಿ ರಚಿಸಲಾಗಿದೆ. ಬಿಜೆಪಿಯಿಂದ ರಚಿಸಲಾದ ಈ ಸಮಿತಿಯಲ್ಲಿ ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ, ರಾಜನಾಥ್ ಸಿಂಗ್ ಹಾಗೂ ಅರ್ಜುನ್ ಮುಂಡಾ ಅವರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ನಾನು ಅಹಮದಾಬಾದ್ ಗೆ ಹೊರಟಿದ್ದೇನೆ ಎಂದು ಹೇಳಿದ್ದಾರೆ.
ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಅಹ್ಮದಾಬಾದ್ ಗೆ ತೆರಳುತ್ತಿದ್ದೇನೆ. ಅಮದಾಬಾದ್ ಗೆ ಬರುವಂತೆ ನನಗೆ ದೂರವಾಣಿ ಕರೆ ಬಂದಿತ್ತು. ನಾಳೆ ಸಭೆ ಮುಗಿಸಿ, ನಾಡಿದ್ದು ಬೆಂಗಳೂರಿಗೆ ವಾಪಸ್ ಬರುತ್ತೇನೆ ಎಂದು ತಿಳಿಸಿದರು.
ಮೀಸಲಾತಿಗಾಗಿ ಹಲವು ಸಮುದಾಯಗಳು ಬೇಡಿಕೆ ಮಂಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಯಡಿಯೂರಪ್ಪ, ಮೀಸಲಾತಿ ನೀಡಲು ಏನು ಸಾಧ್ಯವಿದೆಯೋ ಅದನ್ನೆಲ್ಲ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.