alex Certify ಶೆಟ್ಟರ್ ವಿರುದ್ಧ ಘರ್ಜಿಸಿದ ಯಡಿಯೂರಪ್ಪ: ಲಕ್ಷ್ಮಣ ಸವದಿಗೆ ಸೋಲಿನ ಶಾಕ್ ಕೊಡಲು ಇಂದು ಭರ್ಜರಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೆಟ್ಟರ್ ವಿರುದ್ಧ ಘರ್ಜಿಸಿದ ಯಡಿಯೂರಪ್ಪ: ಲಕ್ಷ್ಮಣ ಸವದಿಗೆ ಸೋಲಿನ ಶಾಕ್ ಕೊಡಲು ಇಂದು ಭರ್ಜರಿ ಪ್ರಚಾರ

ಬೆಳಗಾವಿ: ಜಗದೀಶ್ ಶೆಟ್ಟರ್ ಗೆಲ್ಲಲ್ಲ, ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಗುಡುಗಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಅಥಣಿ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ಧ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಚಾರ ಕೈಗೊಂಡಿದ್ದಾರೆ. ಬುಧವಾರ ಅಥಣಿಗೆ ಆಗಮಿಸಲಿರುವ ಅವರು ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಲಕ್ಷ್ಮಣ ಸವದಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಮಹೇಶ ಕುಮಟಳ್ಳಿ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಯಡಿಯೂರಪ್ಪನವರಿಗೆ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮಹೇಶ ಕುಮಟಳ್ಳಿ ಪರ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಅಥಣಿಗೆ ಆಗಮಿಸಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿರುವ ಯಡಿಯೂರಪ್ಪ ನಂತರ ಮುಗಳಖೋಡ ಯಲ್ಲಾಲಿಂಗೇಶ್ವರ ಗದ್ದುಗೆ ದರ್ಶನ ಪಡೆದು ರೋಡ್ ಶೋ, ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...