alex Certify ಯಡಿಯೂರಪ್ಪರನ್ನು ಕೊಂಡಾಡಿದ ಸಿಎಂ ಬಸವರಾಜ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಡಿಯೂರಪ್ಪರನ್ನು ಕೊಂಡಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ರೈತರಿಗೆ ಉಚಿತ ವಿದ್ಯುತ್ ನೀಡಿದ್ದರು. ರೈತರಿಗೆ ಅನುಕೂಲವಾಗುವಂತಹ ಯೋಜನೆ ತಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಅವರು ಮಾತನಾಡಿದರು. ನೆರೆ ಸಂದರ್ಭದಲ್ಲಿ ಪ್ರವಾಸ ಮಾಡಿ ಪರಿಹಾರ ಘೋಷಣೆ ಮಾಡಿದರು. ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ ಜಾರಿಗೆ ತಂದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದಾರೆ ಎಂದು ವಿಜಯ ಸಂಕಲ್ಪ ಯಾತ್ರೆಯಲ್ಲಿ ಯಡಿಯೂರಪ್ಪ ಅವರನ್ನು ಸಿಎಂ ಬೊಮ್ಮಾಯಿ ಕೊಂಡಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...