ಬೆಂಗಳೂರು: ಹೈಕೋರ್ಟ್ ಆದೇಶದಂತೆ ಯಡಿಯೂರಪ್ಪ ವಿರುದ್ಧ ತನಿಖೆಯಾಗಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮರುತನಿಖೆಗೆ ಆದೇಶಿಸಿದೆ. ಯಡಿಯೂರಪ್ಪನವರ ಮೇಲೆ ನಾವು ಯಾವುದೇ ಆರೋಪ ಮಾಡಿಲ್ಲ ನ್ಯಾಯಾಲಯವೇ ಮರು ತನಿಖೆಗೆ ಆದೇಶಿಸಿದೆ ಎಂದರು.
ಹೈಕೋರ್ಟ್ ಆದೇಶದಂತೆ ಯಡಿಯೂರಪ್ಪ ವಿರುದ್ಧ ತನಿಖೆಯಾಗಲಿ. ಪ್ರಕರಣ ಕೋರ್ಟ್ ನಲ್ಲಿ ಇರುವುದರಿಂದ ಹೆಚ್ಚು ಮಾತನಾಡಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವರಾದ ಎಂ.ಬಿ. ಪಾಟೀಲ ಹೇಳಿದ್ದಾರೆ.