ಬೆಂಗಳೂರು: ಇಂದು ಬೆಳಿಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.
ಬೆಂಗಳೂರು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ಕರೆಯಲಾಗಿದ್ದು, ಯಡಿಯೂರಪ್ಪ ಪ್ರಮುಖ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ, ಚುನಾವಣೆ ಕಾರ್ಯತಂತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಇಂದಿನ ಪತ್ರಿಕಾಗೋಷ್ಠಿಯಲ್ಲಿ ಯಡಿಯೂರಪ್ಪ ಮಹತ್ವದ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ. ಅವರ ತುರ್ತು ಪತ್ರಿಕಾಗೋಷ್ಠಿ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.