alex Certify ದಕ್ಷಿಣ, ಉತ್ತರ ಒಳನಾಡು ಸೇರಿ ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ, ಉತ್ತರ ಒಳನಾಡು ಸೇರಿ ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆಯ ಆರ್ಭಟ ಮುಂದುವರೆಯಲಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಕಡಿಮೆ ಪ್ರಮಾಣದ ಮಳೆ ಇರಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 7 ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

ನೀಡಿದೆ ಜುಲೈ 14, 15 ರಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...