alex Certify ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಮತ್ತೆ ಭಾರಿ ಮಳೆ ಮುನ್ಸೂಚನೆ: 20 ಸೆ.ಮೀ.ವರೆಗೆ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಮತ್ತೆ ಭಾರಿ ಮಳೆ ಮುನ್ಸೂಚನೆ: 20 ಸೆ.ಮೀ.ವರೆಗೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 11.56 ಸೆ.ಮೀ. ನಿಂದ 20.44 ಸೆಂಟಿಮೀಟರ್ ವರೆಗೆ ಮಳೆಯಾಗಲಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಕಲ್ಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕೋಲಾರ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಕೊಪ್ಪಳ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾನುವಾರ ಮಲೆನಾಡಿನ ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...