ಬೆಂಗಳೂರು: ರಾಜ್ಯದ ಕರಾವಳಿ ಸೇರಿ ಹಲವು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಆಗಸ್ಟ್ 30 ರವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 27, 28 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 29, ಮತ್ತು 30 ರಂದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.