ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ಅಕ್ಟೋಬರ್ 21 ರಂದು ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.