ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಗುಲಾಬ್ ಚಂಡಮಾರುತ ಮತ್ತು ಅದರ ಬೆನ್ನಲ್ಲೇ ಬಂದ ಶಾಹಿನ್ ಚಂಡಮಾರುತದ ಉಂಟಾಗಿದ್ದು ಅರಬ್ಬಿ ಸಮುದ್ರದ ಮೇಲೆಯೂ ಪರಿಣಾಮ ಬೀರಿದ್ದು, ಹೀಗಾಗಿ ರಾಜ್ಯದ ಹಲವೆಡೆ ಮೂರು ದಿನ ಮಳೆಯಾಗಲಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 1 ರಿಂದ 3 ರವರೆಗೆ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 1 ರಂದು ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.