
ಬೆಂಗಳೂರು: ರಾಜ್ಯಾದ್ಯಂತ ಎರಡು ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸುಳಿಗಾಳಿ ಪ್ರಭಾವದಿಂದ ರಾಜ್ಯದಲ್ಲಿ ಮಳೆ ಆಗುತ್ತಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ರಾಮನಗರ, ಕೋಲಾರ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹೆಚ್ಚಿನ ಮಳೆ ಆಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ 24 ಗಂಟೆಯಲ್ಲಿ ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.