alex Certify ಗಮನಿಸಿ…! ಇಂದು 20.44 ಸೆ.ಮೀ. ವರೆಗೆ ಭಾರಿ ಮಳೆ ಸಾಧ್ಯತೆ: 6 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಇಂದು 20.44 ಸೆ.ಮೀ. ವರೆಗೆ ಭಾರಿ ಮಳೆ ಸಾಧ್ಯತೆ: 6 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’

ಬೆಂಗಳೂರು: ಆರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಕೇಂದ್ರ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 11.56 ಸೆ.ಮೀ. ನಿಂದ 20.44 ಸೆ.ಮೀ.ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ‘ಆರೆಂಜ್ ಅಲರ್ಟ್ ನೀಡಲಾಗಿದೆ.

ಮಂಡ್ಯ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ತುಮಕೂರು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಗುರುವಾರದಿಂದ ಶುಕ್ರವಾರ ಬೆಳಗ್ಗೆ 8:30ರ ವರೆಗೆ ಉಡುಪಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ದಾವಣಗೆರೆ, ಚಿತ್ರದುರ್ಗ, ಹಾಸನ, ಧಾರವಾಡ, ಬೆಳಗಾವಿ, ಯಾದಗಿರಿ, ಉತ್ತರ ಕನ್ನಡ, ಗದಗ, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...