ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಭಾನುವಾರ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಕೂಡ ಹೆಚ್ಚಿನ ಮಳೆಯಾಗುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಜುಲೈ 12 ಮತ್ತು 13ರಂದು ಆರೆಂಜ್ ಅಲರ್ಟ್ ಹಾಗೂ ಜುಲೈ 14 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಯಾದಗಿರಿ, ರಾಯಚೂರು, ಕಲಬುರ್ಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.