
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಡುವು ನೀಡಿದ್ದ ಮಳೆ ಭಾನುವಾರದಿಂದ ಮತ್ತೆ ಅಬ್ಬರಿಸುವ ಸಾಧ್ಯತೆಯಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಕಾರಣ ತುಮಕೂರು, ರಾಮನಗರ, ಮಂಡ್ಯ, ಮೈಸೂರು ಭಾಗದಲ್ಲಿ ನವೆಂಬರ್ 28 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.